ಚಿಕ್ಕಮಗಳೂರು: ಪ್ರಿಪರೇಟರಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪ ತಾಲೂಕಿನ ಕೊಳೆಹಲಸು ಗ್ರಾಮದಲ್ಲಿ ನಡೆದಿದೆ.
ಪ್ರಕೃತಿ(16) ಮೃತಪಟ್ಟ ವಿದ್ಯಾರ್ಥಿನಿ. ಕೆಪಿಎಸ್ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಪ್ರಕೃತಿ ಪ್ರಿಪರೇಟರಿ ಪರೀಕ್ಷೆಯಲ್ಲಿ ಮೂರು ವಿಷಯದಲ್ಲಿ ಕಡಿಮೆ ಅಂಕ ಗಳಿಸಿದ್ದರು. ಇದರಿಂದ ಮನನೊಂದ ಅವರು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿದ್ದಾರೆ. ನಂತರ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

