HomeCrimePUBG ಗೀಳಿಗೆ ಮತ್ತೊಂದು ಬಲಿ; ಹಣ ಕಳೆದುಕೊಂಡು ಸಾವಿಗೆ ಶರಣಾದ ಯುವಕ

PUBG ಗೀಳಿಗೆ ಮತ್ತೊಂದು ಬಲಿ; ಹಣ ಕಳೆದುಕೊಂಡು ಸಾವಿಗೆ ಶರಣಾದ ಯುವಕ

ಆನ್ಲೈನ್ ಪಬ್ಜಿ ಹುಚ್ಚಿಗೆ ಬಿದ್ದು ಹಲವರು ಹಣ ಕಳೆದುಕೊಂಡ ಘಟನೆಗಳು ಈ ಹಿಂದೆ ವರದಿಯಾಗಿದ್ದು, ಹೀಗೆ ಹಣ ಕಳೆದುಕೊಂಡ ಕೆಲವು ಮಂದಿ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಇಂತಹುದೇ ಒಂದು ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ದೇವಿ ನಗರದಲ್ಲಿ ತನ್ನ ಪೋಷಕರೊಂದಿಗೆ ವಾಸವಾಗಿದ್ದ 20 ವರ್ಷದ ಪ್ರವೀಣ ಪಾಟೀಲ್ ಎಂಬ ವಿದ್ಯಾರ್ಥಿ ಪಬ್ಜಿ ಹಾಗೂ ಇತರೆ ಆನ್ಲೈನ್ ಗೇಮ್ ಗೀಳಿಗೆ ಬಿದ್ದು 80,000 ರೂಪಾಯಿ ಕಳೆದುಕೊಂಡಿದ್ದ ಎನ್ನಲಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂಲತಃ ಚಿತ್ತಾಪುರ ತಾಲೂಕಿನ ಸುಲಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಪ್ರವೀಣ್ ಕುಟುಂಬ ಕಲಬುರಗಿ ನಗರದ ದೇವಿ ನಗರದಲ್ಲಿ ವಾಸಿಸುತ್ತಿದ್ದರು. ಪ್ರವೀಣ್ ಖಾಸಗಿ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಅಂಡ್ ಮಷೀನ್ ಲರ್ನಿಂಗ್ ಕೋರ್ಸ್ ಅಧ್ಯಯನ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಆರ್ ಜಿ ನಗರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular