ಹಾಸನ: ಸರಿಯಾಗಿ ಓದುತ್ತಿಲ್ಲ ಎಂಬ ಕಾರಣಕ್ಕೆ ಪೋಷಕರು ಪುತ್ರನಿಂದ ಮೊಬೈಲ್, ಲ್ಯಾಪ್ಟಾಪ್ ಕಸಿದುಕೊಂಡಿದ್ದರಿಂದ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ.
ಆಕಾಶ್ ಶೆಟ್ಟಿ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಆಕಾಶ್ ಓದಿನ ಕಡೆ ಗಮನ ಹರಿಸದೆ ಸದಾ ಮೊಬೈಲ್, ಲ್ಯಾಪ್ಟಾಪ್ ನಲ್ಲಿ ಕಾಲ ಕಳೆಯುತ್ತಿದ್ದ. ಹೀಗಾಗಿ ಪೋಷಕರು ಓದಿಕೊಳ್ಳುವಂತೆ ಬುದ್ಧಿವಾದ ಹೇಳಿದ್ದು, ಮೊಬೈಲ್, ಲ್ಯಾಪ್ಟಾಪ್ ಕಸಿದುಕೊಂಡಿದ್ದರು. ಇದರಿಂದ ಬೇಸರಗೊಂಡು ಆಕಾಶ್ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.