HomeLatest Newsಸರಿಯಾಗಿ ಓದುತ್ತಿಲ್ಲ ಎಂದು ಮೊಬೈಲ್ ಕಸಿದುಕೊಂಡ ಪೋಷಕರು, ವಿದ್ಯಾರ್ಥಿ ಆತ್ಮಹತ್ಯೆ

ಸರಿಯಾಗಿ ಓದುತ್ತಿಲ್ಲ ಎಂದು ಮೊಬೈಲ್ ಕಸಿದುಕೊಂಡ ಪೋಷಕರು, ವಿದ್ಯಾರ್ಥಿ ಆತ್ಮಹತ್ಯೆ

ಹಾಸನ: ಸರಿಯಾಗಿ ಓದುತ್ತಿಲ್ಲ ಎಂಬ ಕಾರಣಕ್ಕೆ ಪೋಷಕರು ಪುತ್ರನಿಂದ ಮೊಬೈಲ್, ಲ್ಯಾಪ್ಟಾಪ್ ಕಸಿದುಕೊಂಡಿದ್ದರಿಂದ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ.

ಆಕಾಶ್ ಶೆಟ್ಟಿ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಆಕಾಶ್ ಓದಿನ ಕಡೆ ಗಮನ ಹರಿಸದೆ ಸದಾ ಮೊಬೈಲ್, ಲ್ಯಾಪ್ಟಾಪ್ ನಲ್ಲಿ ಕಾಲ ಕಳೆಯುತ್ತಿದ್ದ. ಹೀಗಾಗಿ ಪೋಷಕರು ಓದಿಕೊಳ್ಳುವಂತೆ ಬುದ್ಧಿವಾದ ಹೇಳಿದ್ದು, ಮೊಬೈಲ್, ಲ್ಯಾಪ್ಟಾಪ್ ಕಸಿದುಕೊಂಡಿದ್ದರು. ಇದರಿಂದ ಬೇಸರಗೊಂಡು ಆಕಾಶ್ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular