SHOCKING : ‘ಮೊಬೈಲ್’ ಹೆಚ್ಚು ನೋಡಬೇಡ ಎಂದಿದ್ದಕ್ಕೆ ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ.!

ಶಿವಮೊಗ್ಗ : ರಾಜ್ಯದಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

ಮೊಬೈಲ್ ಹೆಚ್ಚು ನೋಡಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಧನುಶ್ರೀ (20) ಎಂದು ಗುರುತಿಸಲಾಗಿದೆ.

ಯುವತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಪೋಷಕರು ಓದಿನ ಕಡೆ ಗಮನ ಕೊಡು , ಜಾಸ್ತಿ ಮೊಬೈಲ್ ಬಳಸಬೇಡ ಎಂದು ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಯುವತಿ ಕಳೆದ 3 ದಿನದ ಹಿಂದೆ ಮನೆಯಲ್ಲಿ ವಿಷ ಸೇವಿಸಿದ್ದಳು. ವಿಷ ಸೇವಿಸಿದ್ದ ಯುವತಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಯುವತಿ ಮೃತಪಟ್ಟಿದ್ದಾಳೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read