
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಅಮೂಲ್ಯ (15) ಎಂದು ಗುರುತಿಸಲಾಗಿದೆ. ವಸತಿ ಶಾಲೆಯ ಶೌಚಾಲಯದಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ವಿದ್ಯಾರ್ಥಿನಿ ಅಮೂಲ್ಯ ಕೊಪ್ಪ ತಾಲೂಕಿನ ನಾರ್ವೆ ಮೂಲದವಳಾಗಿದ್ದು, ಮೃತ ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಂದರ್ಭಿಕ ಚಿತ್ರ

