ಯಾದಗಿರಿ: ಶಾಲೆ ಆವರಣದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆ ವಡಗೇರಾ ಸರ್ಕಾರಿ ಪ್ರೌಢಶಾಲೆ ಬಳಿ ನಡೆದಿದೆ.
ಪವನ್ ಮಲ್ಲಪ್ಪ ಪೂಜಾರಿ(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. 9ನೇ ತರಗತಿ ವಿದ್ಯಾರ್ಥಿ ಪವನ್ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಸ್ಥಳಕ್ಕೆ ಶಾಸಕ ಚನ್ನಾರೆಡ್ಡಿ ಪಾಟೀಲ್, ಜಿಲ್ಲಾಧಿಕಾರಿ ಹರ್ಷ ಬೋಯಲ್, ಎಸ್ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಡಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

