HomeKarnatakaವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು, ಲೈಂಗಿಕ ದೌರ್ಜನ್ಯ: ಮಾಲೀಕನ ವಿರುದ್ಧ ಎರಡು ಎಫ್ಐಆರ್

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು, ಲೈಂಗಿಕ ದೌರ್ಜನ್ಯ: ಮಾಲೀಕನ ವಿರುದ್ಧ ಎರಡು ಎಫ್ಐಆರ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವನಶ್ರೀ ಖಾಸಗಿ ವಸತಿ ಶಾಲೆಯಲ್ಲಿ 13 ವರ್ಷದ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್ಐಆರ್ ದಾಖಲಾಗಿವೆ.

ಶಾಲೆಯ ಮಾಲೀಕ ಬಿ.ಕೆ. ಮಂಜಪ್ಪ ಅವರನ್ನು ಪೊಲೀಸರು ಬಂಧಿಸಿದ್ದು, ಜೆಎಂಎಫ್‌ಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಒಂದು ಹಾಗೂ ಮತ್ತೊಂದು ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುರುವಾರ ಮದ್ಯಾಹ್ನ ವಿದ್ಯಾರ್ಥಿನಿ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ವಿದ್ಯಾರ್ಥಿನಿಗೆ ಸಾವಿಗೆ ಕಾರಣವೇನು ಎನ್ನುವುದು ಮರಣೋತ್ತರ ಪರೀಕ್ಷೆಯ ನಂತರ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗಳ ಸಾವಿಗೆ ಕಾರಣವಾದ ಶಾಲೆಯ ಆಡಳಿತ ಮಂಡಳಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಬಾಲಕಿಯ ಪೋಷಕರು ಹಾಗೂ ಸಂಬಂಧಿಕರು ಸಾಗರ ಗ್ರಾಮಾಂತರ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular