HomeKarnatakaBIG NEWS: ಸರ್ಕಾರಿ ಶಾಲೆಯೊಂದರಲ್ಲಿ ದುರಂತ: ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿ ಸಾವು

BIG NEWS: ಸರ್ಕಾರಿ ಶಾಲೆಯೊಂದರಲ್ಲಿ ದುರಂತ: ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿ ಸಾವು

ಕಾರವಾರ: ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದಲ್ಲಿ ನಡೆದಿದೆ.

ಎರಡನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಬಸವರಾಜ್ ಮೃತ ವಿದ್ಯಾರ್ಥಿನಿ. ಶಾಲೆಯ ಆವರಣದಲ್ಲಿ ಬೋರ್ವೆಲ್ ತೆಗೆಸಲಾಗಿತ್ತು. ಇದಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯಲಾಗಿತ್ತು. ಮುಖ್ಯ ಲೈನ್ ನಿಂತ ಪಡೆದಿದ್ದ ವಿದ್ಯುತ್ ತಂತಿ ತುಂಡಾಗಿ ಶೌಚಾಲಯದಲ್ಲಿ ಬಿದ್ದಿತ್ತು. ಬಾಲಕಿ ಶೌಚಾಲಯಕ್ಕೆಂದು ಹೋದಾಗ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾಳೆ.

ಶಾಲೆಯ ಮುಖ್ಯಶಿಕ್ಷಕರ ಬೇಜವಾಬ್ದಾರಿಯಿಂದ ಈ ದುರಂತ ಸಂಭವಿಸಿದೆ. ಅನಧಿಕೃತವಾಗಿ ವಿದ್ಯುತ್ ಪಡೆದು, ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರೂ ಗಮನಹರಿಸದಿರುವುದೇ ಘಟನೆಗೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬದವರು ಆಗ್ರಹಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular