HomeKarnatakaBREAKING: ಶಾಲಾ ಆವರಣದಲ್ಲಿ ದುರಂತ: ಆಟವಾಡುತ್ತಿದ್ದ ವಿದ್ಯಾರ್ಥಿ ಮೇಲೆ ಬಿದ್ದ ಕಟ್ಟಡದ ಪಿಲ್ಲರ್: ಬಾಲಕ ಸ್ಥಳದಲ್ಲೇ...

BREAKING: ಶಾಲಾ ಆವರಣದಲ್ಲಿ ದುರಂತ: ಆಟವಾಡುತ್ತಿದ್ದ ವಿದ್ಯಾರ್ಥಿ ಮೇಲೆ ಬಿದ್ದ ಕಟ್ಟಡದ ಪಿಲ್ಲರ್: ಬಾಲಕ ಸ್ಥಳದಲ್ಲೇ ಸಾವು

ತುಮಕೂರು: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿ ಮೇಲೆ ಕಟ್ಟಡದ ಪಿಲ್ಲರ್ ಬಿದ್ದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ದುರಂತ ಸಂಭವಿಸಿದೆ. 4ನೇ ತರಗತಿ ವಿದ್ಯಾರ್ಥಿ ಧನುಷ್ (10) ಮೃತ ಬಾಲಕ. ಶಾಲೆ ಆವರಣದಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಕಟ್ಟಡದ ಪಿಲ್ಲರ್ ಬಾಲಕನ ಮೇಲೆ ಕುಸಿದು ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿರುವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದದನೆ.

ಮೃತ ಧನುಷ್ ಮತ್ತಿಘಟ್ಟದ ಆನಂದಮೂರ್ತಿ ಅವರ ಪುತ್ರ. ಇಂದು ಬೆಳಿಗ್ಗೆ ಶಾಲೆ ಆರಂಭಕ್ಕೂ ಮುನ್ನ ಆಟವಾಡುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular