
ಮೃತಳನ್ನು ಸಿನಿಕ್ಷಾ(16) ಎಂದು ಗುರುತಿಸಲಾಗಿದೆ. ಕಾಂಪೌಂಡ್ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಬಾಲಕಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ.
ಕಳೆದ ನಾಲ್ಕು ದಿನಗಳ ಹಿಂದೆಯಷ್ಟೆ ಮಾನ್ಯತಾ ವಸತಿ ಕಾಲೇಜಿನಲ್ಲಿ ಈಕೆ ಪ್ರವೇಶ ಪಡೆದಿದ್ದಳು. ಈ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

