HomeKarnatakaಆಟವಾಡುವಾಗಲೇ ಆಘಾತಕಾರಿ ಘಟನೆ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಆಟವಾಡುವಾಗಲೇ ಆಘಾತಕಾರಿ ಘಟನೆ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಬೆಂಗಳೂರು: ಶಾಲೆಯಲ್ಲಿ ಬಾಸ್ಕೆಟ್ ಬಾಲ್ ಆಟವಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಆನೇಕಲ್ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ಎಫ್ಎಸ್ ಶಾಲೆಯಲ್ಲಿ ನಡೆದಿದೆ.

ಮೊದಲ ವರ್ಷದ ಪಿಯುಸಿ ವಿದ್ಯಾರ್ಥಿನಿ ಚಾರ್ವಿ(16) ಮೃತಪಟ್ಟವರು ಎಂದು ಹೇಳಲಾಗಿದೆ. ಬಾಸ್ಕೆಟ್ ಬಾಲ್ ಆಡುವಾಗ ಚಾರ್ವಿ ಕುಸಿದು ಬಿದ್ದಿದ್ದಾರೆ. ಮುಖ ನೆಲಕ್ಕೆ ತಾಗಿ ಮೂಗಿನಿಂದ ತೀವ್ರ ರಕ್ತಸ್ರಾವವಾಗಿದೆ. ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಚಾರ್ವಿ ಬಿದ್ದ ಕೂಡಲೇ ಸಹಪಾಠಿಗಳು ನೀರು ಕುಡಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಆಂಬುಲೆನ್ಸ್ ನಲ್ಲಿ ಸಮೀಪದ ಆಸ್ಪತ್ರೆಗೆ ಕರೆ ತಂದು ಅಲ್ಲಿಂದ ಹೆಚ್ಚುವರಿ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ ತೆರಳುವ ಮಾರ್ಗ ಮತ್ತೆ ಚಾರ್ವಿ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular