HomeLatest NewsSHOCKING : ಕೋತಿಗಳ ಕಾಟಕ್ಕೆ ಬೆಚ್ಚಿ ಬಿದ್ದು ಹಾಸ್ಟೆಲ್ ಕಟ್ಟಡದಿಂದ ಬಿದ್ದ ವಿದ್ಯಾರ್ಥಿನಿ : ಗಂಭೀರ...

SHOCKING : ಕೋತಿಗಳ ಕಾಟಕ್ಕೆ ಬೆಚ್ಚಿ ಬಿದ್ದು ಹಾಸ್ಟೆಲ್ ಕಟ್ಟಡದಿಂದ ಬಿದ್ದ ವಿದ್ಯಾರ್ಥಿನಿ : ಗಂಭೀರ ಗಾಯ.!

ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯದ ಕ್ಯಾಂಪಸ್’ನಲ್ಲಿ ಕೋತಿಗಳ ಹಾವಳಿ ಮಿತಿಮೀರಿದ್ದು, ಈ ಉಪಟಳಕ್ಕೆ ಹೆದರಿ ಓರ್ವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ವಿಶ್ವವಿದ್ಯಾಲಯದ ಸರಸ್ವತಿ ನಿಲಯ (ಸಂಶೋಧನಾ ವಿದ್ಯಾರ್ಥಿನಿಯರ ಹಾಸ್ಟೆಲ್) ದಲ್ಲಿ ಈ ಘಟನೆ ಸಂಭವಿಸಿದೆ. ಸಂಶೋಧನಾ ವಿದ್ಯಾರ್ಥಿನಿ ಇವೆಂಜಲಿನಾ ಅವರು ಹಾಸ್ಟೆಲ್ ಕಟ್ಟಡದ ಮೇಲೆ ಓದುತ್ತಾ ಕುಳಿತಿದ್ದರು. ಈ ವೇಳೆ ಏಕಾಏಕಿ ಕೋತಿಗಳ ಹಿಂಡು ಅವರ ಮೇಲೆ ನುಗ್ಗಿದೆ. ಕೋತಿಗಳ ದಾಳಿಯಿಂದ ಗಾಬರಿಗೊಂಡ ವಿದ್ಯಾರ್ಥಿನಿ, ಅವುಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವ ಭರದಲ್ಲಿ ಆಯತಪ್ಪಿ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ.

ಕಟ್ಟಡದಿಂದ ಕೆಳಗೆ ಬಿದ್ದ ಪರಿಣಾಮ ವಿದ್ಯಾರ್ಥಿನಿ ಇವೆಂಜಲಿನಾ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.ಈ ಘಟನೆಯಿಂದಾಗಿ ಕವಿವಿ ಕ್ಯಾಂಪಸ್ನ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.: ಕ್ಯಾಂಪಸ್ನಲ್ಲಿ ಕೋತಿಗಳ ಕಾಟದ ಬಗ್ಗೆ ಹಲವಾರು ಬಾರಿ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.ವಿದ್ಯಾರ್ಥಿಗಳ ಸುರಕ್ಷತೆಗೆ ವಿವಿ ಆಡಳಿತ ಮಂಡಳಿ ಸ್ಪಂದಿಸುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular