ಭುವನೇಶ್ವರ: ಕಾಲೇಜು ವಿದ್ಯಾರ್ಥಿನಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೆಚ್ ಒಡಿ ಹಿಂಸೆಗೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಆವರಣದಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಒಡಿಶಾದ ಬಾಲಸೋರ್ ಕಾಲೇಜಿನಲ್ಲಿ ಈ ದುರಂತ ಸಂಭವಿಸಿದೆ. ವಿದ್ಯಾರ್ಥಿನಿಗೆ ವಿಭಾಗದ ಮುಖ್ಯಸ್ಥ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ತನ್ನ ಲೈಂಗಿಕತೆಗೆ ಸಹಕರಿಸುವಂತೆ ಒತ್ತಾಯಿಸುತ್ತಿದ್ದ. ಒಪ್ಪದಿದ್ದರೆ ನಿನ್ನ ಭವಿಷ್ಯವನ್ನೇ ಹಾಳು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ. ಹೆಚ್ ಒಡಿ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ,
ಘಟನೆಯಿಂದ ನೊಂದ ವಿದ್ಯಾರ್ಥಿನಿ ಬೇರೆ ದಾರಿ ಕಾಣದೆ ಕಾಲೇಜಿನ ಪ್ರಾಂಶುಪಾಲರ ಕೊಠಡಿ ಮುಂದೆಯೇ ಬೆಂಕಿ ಹಚ್ಚಿಕೊಂಡಿದ್ದಾಳೆ. ಶೇ.೯೫ರಷ್ಟು ಭಾಗ ಸುಟ್ಟು ಹೋಗಿದೆ. ಆಕೆಯನ್ನು ರಕ್ಷಿಸಲು ಹೋದ ಮತ್ತೋರ್ವ ವಿದ್ಯಾರ್ಥಿನಿಗೂ ಸುಟ್ಟ ಗಾಯಗಳಾಗಿವೆ. ಆಕೆಗೂ ಶೇ.೭೦ರಷ್ಟು ಭಾಗ ಸುಟ್ಟಿದೆ. ಇಬ್ಬರನ್ನೂ ಭುವನೇಶ್ವರ ಏಮ್ಸ್ ಆಸ್ಪತ್ರೆಗೆ ದಾಖಲಾಗಿದೆ.
ಪ್ರಕರನದಾಖಲಿಸಿಕೊಂಡಿರುವ ಒಡಿಶಾ ಪೊಲೀಸರು ಆರೋಪಿ ಸಮೀರ್ ಕುಮಾರ್ ಸಾಹೋನನ್ನು ಹಾಗೂ ದೂರು ನೀಡಿದರೂ ಕ್ರಮ ಕೈಗೊಳ್ಳದ ಕಾಲೇಜು ಪ್ರಾಂಶುಪಾಲ ದಿಲೀಪ್ ಕುಮಾರ್ ಘೋಷ್ ನನ್ನು ಬಂಧಿಸಿದ್ದಾರೆ. ಇಬ್ಬರನ್ನೂ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.