ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಶಹಾಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಸುರಪುರ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ ಪರಮಣ್ಣ ವಾರಿ(28) ಬಂಧಿತ ಆರೋಪಿ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಾಲಕಿಯ ಗ್ರಾಮದವನಾದ ಪರಮಣ್ಣ ಟಂಟಂ ಚಾಲನೆ ಮಾಡುತ್ತಿದ್ದು, ಆತನಿಗೆ ಮದುವೆಯಾಗಿ ಒಂದು ಮಗುವಿದೆ. ಬಾಲಕಿ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಸಿದ್ದ. ಪರಮಣ್ಣ, ವಸತಿ ಶಾಲೆಯ ಪ್ರಾಂಶುಪಾಲ, ವಾರ್ಡನ್ ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ಟಾಫ್ ನರ್ಸ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.