ಮಂಗಳೂರು: ದಕ್ಷಿಣ ಕನ್ನಡದ ವಿಟ್ಲ ಪಟ್ಟಣದ ಕಾಲೇಜಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾಳೆ.
ಕೇರಳ ಮೂಲದ ಕಾನೂನು ಸಂಘರ್ಷಕ್ಕೆ ಒಳಗಾದ ಅಪ್ರಾಪ್ತ 2025 ಡಿಸೆಂಬರ್ 21ರಂದು ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸೆಗಿದ್ದ ಎಂದು ಆರೋಪಿಸಲಾಗಿದೆ. ಸೆಪ್ಟೆಂಬರ್ 8ರಂದು ವಿದ್ಯಾರ್ಥಿನಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸೆ. 9ರಂದು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.
ಕೇರಳ ಮೂಲದ ಬಾಲಕ ಮೊಬೈಲ್ ಮೂಲಕ ಬಾಲಕಿ ಪರಿಚಯಿಸಿಕೊಂಡು ನಂತರ ಆಕೆಯನ್ನು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ: ಅರ್ಜಿ ಆಹ್ವಾನ
ಮಡಿಕೇರಿ: ಪ್ರಸಕ್ತ(2026-27) ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್ಸೈಟ್ https://kswdc.karnataka.gov.in ರ ಮೂಲಕ ಅರ್ಜಿ ಸಲ್ಲಿಸುವುದು, ಅರ್ಜಿ ಸಲ್ಲಿಸಲು ಅಕ್ಟೋಬರ್, 31 ರ ಸಂಜೆ 5.30 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ. 08272-228010, 9482194105 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಪೌರಕಾರ್ಮಿಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ
ಮಡಿಕೇರಿ: ಪೌರಾಡಳಿತ ನಿರ್ದೇಶನಾಲಯದ ಆದೇಶದಂತೆ ಮಡಿಕೇರಿ ನಗರಸಭೆಯಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ 11 ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್, 22 ಕೊನೆಯ ದಿನವಾಗಿದೆ. ಅರ್ಜಿಯನ್ನು ಮಡಿಕೇರಿ ನಗರಸಭೆಯಲ್ಲಿ ಕಚೇರಿ ವೇಳೆಯಲ್ಲಿ ಪಡೆದು, ಸಲ್ಲಿಸುವುದು. ನೇರ ಪಾವತಿಯಡಿ ಪೌರಕಾರ್ಮಿಕರ ನೇಮಕಾತಿಗೆ ನಿಗಧಿಪಡಿಸಿದ ವಯೋಮಿತಿ/ ವಿದ್ಯಾರ್ಹತೆ, ಅರ್ಹತೆಗಳು, ನೇಮಕಾತಿ ಷರತ್ತುಗಳು ವಿಶೇಷ ಸೂಚನೆಗಳು ಹಾಗೂ ಇತರೆ ಅಗತ್ಯ ಮಾಹಿತಿಯನ್ನು ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕೃತ ವೆಬ್ಸೈಟ್ www.kodagu.dudc.mrc.gov.in ಹಾಗೂ ಮಡಿಕೇರಿ ನಗರಸಭೆ www.madikericity.mrc.gov.in ಅಧಿಕೃತ ವೆಬ್ಸೈಟ್ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಆಯ್ಕೆ ಮತ್ತು ನೇರ ಪಾವತಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

