HomeKarnatakaBREAKING NEWS: ತರಗತಿಯಲ್ಲಿಯೇ ಕುಸಿದು ಬಿದ್ದ ವಿದ್ಯಾರ್ಥಿ: ಹೃದಯಾಘಾತದಿಂದ ಸಾವು

BREAKING NEWS: ತರಗತಿಯಲ್ಲಿಯೇ ಕುಸಿದು ಬಿದ್ದ ವಿದ್ಯಾರ್ಥಿ: ಹೃದಯಾಘಾತದಿಂದ ಸಾವು

ರಾಯಚೂರು: ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ತರುಣ್ ಅತ್ತನೂರು (14) ಮೃತ ದುರ್ದೈವಿ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಅತ್ತನೂರು ಗ್ರಾಮದಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ ಕ್ಲಾಸ್ ರೂಂ ನಲ್ಲಿಯೇ ಹೃದಯಾಘಾತಕ್ಕೀಡಾಗಿದ್ದಾನೆ.

ಪಾಠ ಕೇಳುತ್ತಿದ್ದ ತರುಣ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಶಿಕ್ಷಕರು ಆತನನ್ನು ಸಿರಿವಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗೆಂದು ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಬಾಲಕ ಕೊನೆಯುಸಿರೆಳೆದಿದ್ದಾನೆ. ಹೃದಯಾಘಾತದಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿರಿವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular