HomeIndiaSHOCKING NEWS: ಕ್ಲಾಸ್ ರೂಂ ನಲ್ಲಿ ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಬಾಲಕಿ

SHOCKING NEWS: ಕ್ಲಾಸ್ ರೂಂ ನಲ್ಲಿ ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಬಾಲಕಿ

ಚೆನ್ನೈ: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಘಟನೆ ಹೆಚ್ಚುತ್ತಿದೆ. ತರಗತಿಯಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನ ರಾಣಿಪೇಟ್ ನಲ್ಲಿ ಖಾಸಗಿ ಶಾಲೆಯೊಂದರಲ್ಲಿ ಈ ದುರಂತ ಸಂಭವಿಸಿದೆ. ವಿದ್ಯಾರ್ಥಿನಿ ತರಗತಿಯಲ್ಲಿ ಏಕಾಏಕಿ ಕುಸಿದು ಬೀಳುತ್ತಿರುವ ದೃಶ್ಯ ಕ್ಲಾಸ್ ರೂಂನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ತಕ್ಷಣ ವಿದ್ಯಾರ್ಥಿನಿಯನ್ನು ಮೆಲ್ವಿಶಾರಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಳು. ಹೃದಯಾಘಾತದಿಂದಾಗಿ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕಿ ಕೆಲ ದಿನಗಳಿಂದ ಹೃದಯಸಂಬಂಧಿ ಕಾಯಿಲೀ ಚಿಕಿತ್ಸೆ ಪಡೆಯುತ್ತಿದ್ದಳು.

For Latest News Updates, Join Our Whatsapp Community🚩
RELATED ARTICLES

Most Popular