ಕೊಯಮತ್ತೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಮೂವರು ಆರೋಪಿಗಳನ್ನು ಮಂಗಳವಾರ ಮುಂಜಾನೆ ಬಂಧಿಸಲಾಯಿತು. ಪೊಲೀಸರ ಪ್ರಕಾರ, ಬಂಧನ ಕಾರ್ಯಾಚರಣೆಯ ಸಮಯದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರ ಕಾಲಿಗೆ ಗುಂಡು ಹಾರಿಸಲಾಗಿದೆ. ನಂತರ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಭಾನುವಾರ ರಾತ್ರಿ ಕೊಯಮತ್ತೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಿಂಭಾಗದ ಬೃಂದಾವನ ನಗರದ ಬಳಿ 20 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಲಾಗಿತ್ತು.
ಯುವತಿ 10.30 ರ ಸುಮಾರಿಗೆ ತನ್ನ ಗೆಳೆಯನೊಂದಿಗೆ ನಿಲ್ಲಿಸಿದ್ದ ಕಾರಿನಲ್ಲಿ ಇದ್ದಾಗ, ಮೂವರು ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಬಂದು, ಕಾರಿನ ಮುಂಭಾಗದ ಗಾಜನ್ನು ಒಡೆದು, ಆಯುಧಗಳಿಂದ ಗೆಳೆಯನ ಮೇಲೆ ಹಲ್ಲೆ ನಡೆಸಿ, ಆಕೆಯನ್ನು ಅಪಹರಿಸಿದ್ದಾರೆ.
ನಂತರ ಬೆಳಿಗ್ಗೆ 4:30 ರ ಸುಮಾರಿಗೆ ಯುವತಿಯನ್ನ ನಿರ್ಜನ ಪ್ರದೇಶದಲ್ಲಿ ಬಿಡಲಾಯಿತು ಮತ್ತು ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದರು. ಚಿಕಿತ್ಸೆಗಾಗಿ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಸದ್ಯ ವಿದ್ಯಾರ್ಥಿನಿ ವೈದ್ಯಕೀಯ ಆರೈಕೆಯಲ್ಲಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದರು.
ಗುಣ, ಕರುಪ್ಪಸಾಮಿ ಮತ್ತು ಕಾರ್ತಿಕ್ ಅಲಿಯಾಸ್ ಕಾಳೀಶ್ವರನ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಿಂದ ಅವರು ದಾಖಲಾಗಿರುವ ದೃಶ್ಯಗಳು ಹೊರಬಂದಿದೆ. ಕೊಯಮತ್ತೂರು ನಗರದ ಹೊರವಲಯದಲ್ಲಿರುವ ವೆಲ್ಲಕಿನಾರು ಎಂಬಲ್ಲಿ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಬೇಕಾಯಿತು.
College student allegedly gang raped near Coimbatore Airport | Three accused, Guna, Karuppasamy, and Karthik alias Kaleeswaran have been arrested by the Police.
— ANI (@ANI) November 4, 2025
Visuals from the hospital in Coimbatore where they have been admitted. They were trying to escape from the spot when… pic.twitter.com/YFJ1w0ZB13
