ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ರಕ್ಕಸ ರಸ್ತೆ ಗುಂಡಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಬೂದಿಗೆರೆ ಕ್ರಾಸ್ ಬಳಿ ನಡೆದಿದೆ.
ರಸ್ತೆ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಧನುಶ್ರೀ (22) ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬಿದ್ದ ತನುಶ್ರೀ ಮೇಲೆ ಟಿಪ್ಪರ್ ಹರಿದಿದ್ದು, ಸ್ಥಳದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.
ಘಟನೆ ಬಳಿಕ ಟಿಪ್ಪರ್ ಚಾಲಕ ವಾಹನ ಸಮೇತ ಎಸ್ಕೇಪ್ ಆಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

