HomeKarnatakaಹೊಟ್ಟೆ ನೋವಿನ ಔಷಧ ಬದಲು ಕ್ರಿಮಿನಾಶಕ ಸೇವಿಸಿದ ಯುವಕ ಸಾವು

ಹೊಟ್ಟೆ ನೋವಿನ ಔಷಧ ಬದಲು ಕ್ರಿಮಿನಾಶಕ ಸೇವಿಸಿದ ಯುವಕ ಸಾವು

ದಾವಣಗೆರೆ: ಹೊಟ್ಟೆ ನೋವಿನ ಔಷಧ ಬದಲಿಗೆ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿದ ಯುವಕ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಸಮೀಪದ ವೆಂಕಟೇಶ್ವರ ಕ್ಯಾಂಪ್ ನಲ್ಲಿ ನಡೆದಿದೆ.

ವಿಜಯ್ ಕೃಷ್ಣ(24) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ದಾವಣಗೆರೆ ವಿವಿಯಲ್ಲಿ ಎಂಬಿಎ ಓದುತ್ತಿದ್ದ ವಿಜಯ್ ಕೃಷ್ಣ ಆಕಸ್ಮಿಕವಾಗಿ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರು ನಾಟಿ ಔಷಧಿ ಪಡೆದಿದ್ದರೂ ಗುಣಮುಖ ಆಗಿರಲಿಲ್ಲ. ಮನೆಯಲ್ಲಿ ಆಕಸ್ಮಿಕವಾಗಿ ಹೊಟ್ಟೆ ನೋವಿನ ಔಷಧದ ಬದಲಿಗೆ ಕ್ರಿಮಿನಾಶಕ ಸೇವಿಸಿದ್ದಾರೆ. ಗುರುವಾರ ಘಟನೆ ನಡೆದಿದ್ದು, ಅವರನ್ನು ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular