ಲಖನೌ: ಢಾಬಾವೊಂದರಲ್ಲಿ ಎಂ ಎಸ್ ಸಿ ವಿದ್ಯಾರ್ಥಿನಿಯ ಶವ ಕತ್ತು ಸೀಲಿರುವ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
22 ವರ್ಷದ ಅಲ್ಕಾ ಬಿಂದ್ ಕೊಲೆಯಾಗಿರುವ ವಿದ್ಯಾರ್ಥಿನಿ. ಉತ್ತರ ಪ್ರದೇಶದ ಮಿರ್ಜಾಮುರಾದ್ ಪ್ರದೇಶದ ಢಾಬಾದಲ್ಲಿ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ.
ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿನಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಬಗ್ಗೆ ವರದಿಯಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಭದೋಹಿಯಲ್ಲಿ ಆರೋಪಿ ಸಾಹಿದ್ ಬಿಂದ್ ಎಂಬಾತನ್ನು ಬಂಧಿಸಿದ್ದಾರೆ.
ಬಂಧನದ ವೇಳೆ ಆರೋಪಿ ಪೊಲೀಸರ ಗನ್ ಕಸಿದುಕೊಂಡು ಗುಂಡು ಹಾರಿಸಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಯುವತಿಯ ಮೊಬೈಲ್ ಕರೆ ಹಗೂ ಸಿಸಿಟಿವಿ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಯುವತಿಯಿಂದ ಮದುವೆಗೆ ಒತ್ತಡ ಹಾಗೂ ಹಣಕ್ಕಾಗಿ ಬೇಡಿಕೆ ಇಟ್ಟ ಕಾರಣಕ್ಕಾಗಿ ಆಕೆಯನ್ನು ಕೊಂದಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದಾನೆ ಎಂದು ಪೊಲೀಸರು ತಿಳಿಸಿದ್ದಾರೆ.