HomeKarnatakaSHOCKING: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿ ಕತ್ತು ಸೀಳಿ ಹತ್ಯೆ: ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

SHOCKING: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿ ಕತ್ತು ಸೀಳಿ ಹತ್ಯೆ: ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಹಾಸನ: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.

ಬೆಳಗುಂಬದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೊಲೆಯಾದ ಬಾಲಕಿ. ಶಾಲೆ ಮುಗಿಸಿ ಹೋಗುವಾಗ ಬಾಲಕಿಯನ್ನು ಹತ್ಯೆ ಮಾಡಲಾಗಿದೆ.

ಅರಸೀಕೆರೆ ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದ ಅರಸೀಕೆರೆ ತಾಲೂಕಿನ ಜಾಣಘಟ್ಟ ಗ್ರಾಮದ ನಿವಾಸಿ ಶರತ್ ಕೃತ್ಯವಸೆಗಿದ್ದಾನೆ. ಬಾಲಕಿಯನ್ನು ಹತ್ಯೆ ಮಾಡಿದ ನಂತರ ಅರಸೀಕೆರೆ ತಾಲೂಕಿನ ಬಂಡಿಹಳ್ಳಿ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಸ್ಥಳಕ್ಕೆ ಪೊಲೀಸ್ ಅಧಿಕ್ಷಕರಾದ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular