HomeKarnatakaBIG NEWS: ವಿದ್ಯಾರ್ಥಿನಿಯ ಕತ್ತು ಸೀಳಿ ಕೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಯುವಕ

BIG NEWS: ವಿದ್ಯಾರ್ಥಿನಿಯ ಕತ್ತು ಸೀಳಿ ಕೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಯುವಕ

ಹಾಸನ: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಯನ್ನು ಬರ್ಬರವಾಗಿ ಕೊಂದ ಯುವಕ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.

ಬೆಳಗುಂಬ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಭೂಮಿಕಾ ಮೃತಳು. ಪದವಿ ಓದುತ್ತಿದ್ದ ಶರತ್ ಎಂಬ ಯುವಕ ಭೂಮಿಕಾ ಹಿಂದೆ ಬಿದ್ದು, ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಭೂಮಿಕಾ ನಿರಾಕರಿಸಿದ್ದಳು. ಭೂಮಿಕಾ ಶಾಲೆಯಿಂದ ಮನೆಗೆ ಬರುತ್ತಿದ್ದ ವೇಳೆ ಏಕಾಏಕಿ ಆಕೆಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಬಳಿಕ ಅರಸಿಕೆರೆ ತಾಲೂಕಿನ ಬಂಡಿಹಳ್ಳಿ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಹಾಸನ ಎಸ್ಪಿ ಹಾಗೂ ಅರಸಿಕೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular