HomeKarnatakaBREAKING NEWS: ಬಸ್ ತಡೆದು ತೀವ್ರಗೊಂಡ ವಿದ್ಯಾರ್ಥಿಗಳ ಪ್ರತಿಭಟನೆ; ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥ

BREAKING NEWS: ಬಸ್ ತಡೆದು ತೀವ್ರಗೊಂಡ ವಿದ್ಯಾರ್ಥಿಗಳ ಪ್ರತಿಭಟನೆ; ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥ

ಬೆಳಗಾವಿ: ಪ್ರತಿಭಟನೆ ನಡೆಸುತಿದ್ದ ವೇಳೆ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಸ್ತವಾಡದಲ್ಲಿ ನಡೆದಿದೆ.

ಬಸ್ತವಾಡದಲ್ಲಿ ವಿದ್ಯಾರ್ಥಿಗಳು ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಸರಿಯಾದ ಸಮಯಕ್ಕೆ ಬಸ್ ಗಳು ಬರುತ್ತಿಲ್ಲ, ವಿದ್ಯಾರ್ಥಿಗಳಿಗೆ ಬಸ್ ಗಳನ್ನು ನಿಲ್ಲಿಸುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಪ್ರಿಯಾ ಕಾಂಬಳೆ ಹಾಗೂ ಪ್ರಿಯಾ ಹೋಳ್ಕರ್ ಎಂಬ ಇಬ್ಬರು ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular