ನವದೆಹಲಿ: 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಆಕೆಯ ಸ್ನೇಹಿತರೇ ಅತ್ಯಾಚಾರವೆಸಗಿರುವ ಘೋರ ಘಟನೆ ದೆಹಲಿಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೆ ಇದ್ದಾಗ ಆಕೆಯ ಪರಿಚಿತರೇ ಆದ ನಾಲ್ವರು ವಿದ್ಯಾರ್ಥಿಗಳು ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಾರೆ. ಕೃತ್ಯದ ಓರ್ವ ವಿದ್ಯಾರ್ಥಿ ಸಂತ್ರಸ್ತೆ ವಿದ್ಯಾರ್ಥಿನಿಗೆ ಇನ್ ಸ್ಟಾಗ್ರಾಂ ನಲ್ಲಿ ಪರಿಚಯನಾಗಿದ್ದ. ತನ್ನ ಮೂವರು ಗೆಳೆಯರೊಂದಿಗೆ ಬಾಲಕಿ ಮನೆಗೆ ನುಗ್ಗಿ ಅಟ್ಟಹಾಸ ಮೆರೆದಿದ್ದಾನೆ.
ಮಾರುಕಟ್ಟೆಗೆ ಹೋಗಿದ್ದ ಬಾಲಕಿ ತಾಯಿ ಮನೆಗೆ ಬಂದಾಗ ಮನೆಯ ಬಾಗಿಲು ತೆಗೆದುಕೊಂಡಿರುವುದು ಕಂಡು ಗಾಬರಿಯಾಗಿದ್ದಾರೆ. ಮನೆ ಒಳಗೆ ಹೋಗಿ ನೋಡಿದಾಗ ಮನೆಯ ರೂಂ ನಲ್ಲಿ ತನ್ನ ಮಗಳ ಮೇಲೆ ನಾಲ್ವರು ಹುಡುಗರು ದೌರ್ಜನ್ಯವೆಗಗುತ್ತಿರುವುದು ಕಂಡುಬಂದಿದೆ.
ತಕ್ಷಣ ಮಹಿಳೆ ಮಗಳನ್ನು ರಕ್ಷಿಸಿ ನಾಲ್ವರು ಹುಡುಗರನ್ನು ರೀಮಿನಲ್ಲಿ ಕೂಡಿಹಾಕಿ ಬೀಗ ಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಗೆ ಬರುವಷ್ಟರಲ್ಲಿ ವಸತಿ ಸಮುಚ್ಚಯದ ಆಡಳಿತ ಮಂಡಳಿ ಸದಸ್ಯರು ಹುಡುಗರನ್ನು ಬಿಡಿಸಿ ಕಳುಹಿಸಿದ್ದಾರೆ. ಸಂತ್ರಸ್ತ ಬಾಲಕಿಯ ತಂತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ನಾಲ್ವರು ಅಪ್ರಾಪ್ತ ಬಾಲಕರ ವಿರುದ್ಧ ದೂರು ದಾಖಲಾಗಿದೆ. ಆರೋಪಿ ಬಾಲಕರು 9, 10 ಹಾಗೂ 11ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ. ಪ್ರಕರಣ ಸಂಬಂಧ ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ತಿಳಿದುಬಂದಿದೆ.