HomeIndiaBIG NEWS: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಮನೆಗೆ ಬೆಂಕಿಯಿಟ್ಟು ಬಾಲಕಿ ಕುಟುಂಬದವರ ಆಕ್ರೋಶ

BIG NEWS: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಮನೆಗೆ ಬೆಂಕಿಯಿಟ್ಟು ಬಾಲಕಿ ಕುಟುಂಬದವರ ಆಕ್ರೋಶ

ಹೈದರಾಬಾದ್: 7ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದು, ಅತ್ಯಾಚಾರವೆಸಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಬಾಲಕಿಯ ಕುಟುಂಬದವರು ಹಾಗೂ ಗ್ರಾಮಸ್ಥರು ಕಾಮುಕನ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೆಲಂಗಾಣದ ಸಿದ್ದಿಪೇಟ್ ನಲ್ಲಿ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚರವೆಸಗಿದ್ದಾನೆ. ಘಟನೆಯಿಂದ ಬಾಲಕಿ ಕುಟುಂಬದವರು ಹಾಗೂ ಗ್ರಾಮಸ್ಥರು ಆರೋಪಿ ಮನೆಗೆ ತೆರಳಿ ಮನೆಗೆ ಬೆಂಕಿ ಹಚ್ಚಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಸಂತ್ರಸ್ತ ಬಾಲಕಿಯ ಕುಟುಂಬದವರು ಹಾಗೂ ಗ್ರಾಮಸ್ಥರು ಪ್ರತಿಭಟನೆ ಮುಂದುವರೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವಾರಣ ನಿರ್ಮಾಣವಾಗಿದೆ. ಸಿದ್ದಿಪೇಟೆ ಪೊಲೀಸ್ ಆಯುಕ್ತರು ಸ್ಥಳಕ್ಕಾಗಮಿಸಿ ಗ್ರಾಮಸ್ಥರ ಜೊತೆ ಮಾತನಾಡಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸದ್ಯ ಪರಿಸ್ಥಿತಿ ತಹಬದಿಗೆ ಬಂದಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular