ಸ್ಪೆಷಲ್ ಕ್ಲಾಸ್ ಗೆ ಬಂದಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕನಿಗೆ ಹತ್ತು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ವಿಜಯವಾಡ ಕೋರ್ಟ್ ತೀರ್ಪು ಪ್ರಕಟಸಿದೆ.
ಪುಲ್ಲೆಟಿಕುರ್ತಿ ಭುವನಚಂದ್ರ (31 ಶಿಕ್ಷೆಗೊಳಗಾದ ಶಿಕ್ಷಕ. 2023ರ ಜುಲೈ 23ರಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸುದೀರ್ಘ ವಿಚಾರಣೆ ಬಳಿಕ ಜೈಲುಶಿಕ್ಷೆ ಪ್ರಕಟಿಸಿದೆ.
ಸ್ಪೆಷಲ್ ಕ್ಲಾಸ್ ಗೆ ಬಂದಿದ್ದ ವಿದ್ಯಾರ್ಥಿನಿ ಜೊತೆ ಶಿಕ್ಷಕ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ನಡೆಸಲು ಮುಂದಾಗಿದ್ದಾನೆ. ಈ ವೇಳೆ ತಪ್ಪಿಸಿಕೊಳ್ಳಲು ವಿದ್ಯಾರ್ಥಿನಿ ಕಟ್ಟಡದಿಂದ ಜಿಗಿದಿದ್ದಳು. ಶಿಕ್ಷಕನ ವಿರುದ್ಧ ಎಫ್ ಐ ಆರ್ ದಾಖಲಿಸಿ ಪೊಲೀಸರು ಬಂಧಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇದೀಗ ಕೋರ್ಟ್ ಅಪರಾಧಿಗೆ ಹತ್ತು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ. 3 ಲಕ್ಷ ರೂಪಾಯಿ ಪರಿಹಾರ ಹಾಗೂ ದಂಡದ ರೂಪವಾಗಿ ಹೆಚ್ಚುವರಿಯಾಗಿ 10 ಸಾವಿರ ರೂಪಾಯಿ ನೀಡಬೇಕು ಎಂದು ಆದೇಶಿಸಿದೆ.