HomeLatest NewsBREAKING: ಬೆಂಗಳೂರಿನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

BREAKING: ಬೆಂಗಳೂರಿನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಬೆಂಗಳೂರಿನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿಗಳೇ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಬನ್ನೇರುಘಟ್ಟ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಮೇಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹೊಸದಾಗಿ ಹಾಸ್ಟೆಲ್ ಗೆ ಸೇರಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿಗೆ ದ್ವಿತೀಯ ಪಿಯು ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದಾರೆ. ರ್ಯಾಗಿಂಗ್ ಬಗ್ಗೆ ವಿದ್ಯಾರ್ಥಿನಿ ಹಾಸ್ಟೆಲ್ ವಾರ್ಡನ್ ಹಾಗೂ ಪ್ರಾಂಶುಪಾಲರಿಗೆ ದೂರು ನೀಡಿದ್ದಳು. ದೂರು ನೀಡಿದ್ದಕ್ಕೆ ವಿದ್ಯಾರ್ಥಿಗಳು ಆಕೆಯನ್ನು ನಾಲ್ಕು ದಿನಗಳ ಕಾಲ ಹಾಸ್ಟೆಲ್ ರೂಂ ನಲ್ಲಿ ಕೂಡಿಹಾಕಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಬಟ್ಟೆ ಬಿಚ್ಚಿಸಿ, ನೃತ್ಯ ಮಾಡಿಸಿ ಕಬ್ಬಿಣದ ಹ್ಯಾಂಗರ್ ನಿಂದಲೂ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದಾರೆ. ಈ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿ ದೂರು ನೀಡಿದ್ದಾಳೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular