HomeKarnatakaBIG NEWS: ವಿದ್ಯಾರ್ಥಿನಿಯರಿಗೆ ಕಿರುಕುಳ; ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಸಸ್ಪೆಂಡ್

BIG NEWS: ವಿದ್ಯಾರ್ಥಿನಿಯರಿಗೆ ಕಿರುಕುಳ; ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಸಸ್ಪೆಂಡ್

ಮೈಸೂರು: ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಶಾಲೆಯ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಪ್ರಕಾಶ್ ಅಮಾನತುಗೊಂಡಿರುವ ಮುಖ್ಯ ಶಿಕ್ಷಕ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದಾಸನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ.

ವಿದ್ಯಾರ್ಥಿನಿಯರನ್ನು ಮೈ ಕೈ ಮುಟ್ಟಿ ಮಾತನಾಡಿಸುವುದು, ಅಸಭ್ಯವಾಗಿ ವರ್ತಿಸುವುದು ಮಾಡುತ್ತಿದ್ದ ಎಂದು ಪೋಷಕರು ಶಿಕ್ಷಕನ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿ ಶಿಕ್ಷಕನ ವಿರುದ್ಧ ತನಿಖೆ ನಡೆಸಲಾಗಿತ್ತು. ಪೋಕ್ಸೋ ಕೇಸ್ ದಾಖಲಿಸಿ, ಸಸ್ಪೆಂಡ್ ಮಾಡುವಂತೆ ಡಿಡಿಪಿ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕ ಪ್ರಕಾಶ್ ನನ್ನು ಅಮಾನತು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular