HomeKarnatakaಆಳ್ವಾಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರಿಂದ ಶವ ಸ್ಥಳಾಂತರಿಸದಂತೆ...

ಆಳ್ವಾಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರಿಂದ ಶವ ಸ್ಥಳಾಂತರಿಸದಂತೆ ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್(18) ನೇಣಿಗೆ ಶರಣಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಾಸ್ಟೆಲ್ ನಲ್ಲಿ ಮನೋಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತುರ್ಚಿಹಾಳ ಗ್ರಾಮದ ನಿವಾಸಿ ಮಲ್ಲಪ್ಪನವರ ಪುತ್ರ ಮನೋಜ್ ಆತ್ಮಹತ್ಯೆ ಮಾಡಿಕೊಂಡಿದ್ದು, ತಾವು ಬರುವವರೆಗೆ ಶವ ಸ್ಥಳಾಂತರ ಮಾಡಿದಂತೆ ಪೋಷಕರು ಆಗ್ರಹಿಸಿದ್ದಾರೆ. ಮನೋಜ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular