ಬೆಳಗಾವಿ: 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಏಕಾಏಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಗಹ್ಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ನಿಪ್ಪಾಣಿ ಪಟ್ಟಣದ ಮಾನೆ ಪ್ಲಾಟ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 15 ವರ್ಷದ ಸಾದ್ ವಾಸಿಂ ಬಾಗವಾನ್ ಮೃತ ಬಾಲಕ. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಗೈದ್ದಾನೆ.
ವಿದ್ಯಾರ್ಥಿ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ನಿಪ್ಪಾಣಿ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
