HomeLatest NewsSHOCKING: ಸ್ನೇಹಿತೆ ಸಾವಿನಿಂದ ಮನನೊಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

SHOCKING: ಸ್ನೇಹಿತೆ ಸಾವಿನಿಂದ ಮನನೊಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಆತ್ಮೀಯ ಸ್ನೇಹಿತೆಯ ಸಾವಿನಿಂದ ಮನನೊಂದಿದ್ದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಡೆದಿದೆ.

ಶರ್ಮಿಳಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೂರು ತಿಂಗಳ ಹಿಂದೆ ಶರ್ಮಿಳಾ ಗೆಳತಿ ಸಾವನ್ನಪ್ಪಿದ್ದಳು. ಇದರಿಂದ ತೀವ್ರವಾಗಿ ನೊಂದಿದ್ದ ಶರ್ಮಿಳಾ ಅದೇ ಕೊರಗಿನಲ್ಲಿದ್ದಳು. ಈಗ ಇದ್ದಕ್ಕಿದ್ದಂತೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular