ಹೈದರಾಬಾದ್: ಮಹಾರಾಷ್ಟ್ರದ ಥಾಣೆಯಲ್ಲಿ 8 ನೇ ತರಗತಿ ವಿದ್ಯಾರ್ಥಿನಿ ಶಾಲೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ ಆಂಧ್ರಪ್ರದೇಶದಲ್ಲಿಯೂ ಇಂತದ್ದೇ ಘಟನೆ ನಡೆದಿದೆ. ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದಿಂದ ಜಿಗಿದು ಸಾವಿಗೆ ಶರಣಾಗಿದ್ದಾಳೆ.
ಮೃತ ವಿದ್ಯಾರ್ಥಿನಿಯನ್ನು ಕುಪ್ಪಂ ಪಿಎಸ್ ಕಾಲೇಜಿನ ಬಿಎಸ್ ಸಿ ನರ್ಸಿಂಗ್ ವಿದ್ಯಾರ್ಥಿನಿ ಪಲ್ಲವಿ (19) ಎಂದು ಗುರುತಿಸಲಾಗಿದೆ. ಮಾನಸಿಕ ಒತ್ತಡದಿಂದ ವಿದ್ಯಾರ್ಥಿನಿ ದುಡುಕಿನ ನಿರ್ಧರ ಕೈಗೊಂಡಿದ್ದಾಳೆ.
ಕಾಲೇಜು ವಿದ್ಯಾರ್ಥಿನಿ ನಿಲಯದ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜು ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
