ಮುಂಬೈ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ.
ಮಹಾರಾಷ್ಟ್ರದ ಅಕೋಲಾದಲ್ಲಿ ಈ ದುರಂತ ಸಂಭವಿಸಿದೆ. ಹಿರಿಯ ವಿದ್ಯಾರ್ಥಿ ಪದೇ ಪದೇ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಬೇಸತ್ತ ೧೩ ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ ಸ್ಟಾ ಗ್ರಾಂನಲ್ಲಿ ನಿರಂತರವಾಗಿ ಸಂದೇಶ ಕಳುಹಿಸುತ್ತಿದನಂತೆ. ಇದರಿಂದ ನೊಂದಿದ್ದ ಬಾಲಕಿ ಶುಕ್ರವಾರ ಶಾಲೆಯಿಂದ ಮನೆಗೆ ಬಂದವಳು ತನ್ನ ಕೋಣೆಗೆ ಹೋಗಿದ್ದಾಳೆ.
ಕೆಲಸಕ್ಕೆ ಹೋಗಿದ್ದ ಪೋಷಕರು ಮಗಳಿಗೆ ಹಲವು ಬಾರಿ ಕರೆ ಮಾಡಿದ್ದಾರೆ. ಆದರೆ ಆಕೆ ಫೋನ್ ರಿಸೀವ್ ಮಾಡುತ್ತಿರಲಿಲ್ಲ. ಈ ವೇಳೆ ಪಕ್ಕದ ಮನೆಯವರಿಗೆ ನೋಡುವಂತೆ ಪೋಷಕರು ಹೇಳಿದ್ದರು. ಪಕ್ಕದಮನೆಯವರು ಮನೆಗೆ ಬಂದು ನೋಡಿದಾಗ ಬಾಲಕಿ ನೇಣಿಗೆ ಕೊರಳೊಡ್ಡಿದ್ದಳು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪ್ರಾಣ ಉಳಿಸಲು ಸಾಧ್ಯವಾಗಿಲ್ಲ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಕಾಗಿ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಬಾಲಕಿಯನ್ನು ಶಾಲೆಗೆ ಹೋಗುವಾಗ, ರಸ್ತೆಯಲ್ಲಿ ಹೋಗ್ವಾಗ ಹಿಂಬಾಲಿಸುವುದು, ಪದೇ ಪದೇ ಇನ್ ಸ್ಟಾ ಗ್ರಾಂ ನಲ್ಲಿ ಸಂದೇಶಗಳನ್ನು ಕಳುಹಿಸುವುದು, ಕಿರುಕುಳ ನೀಡುವುದು ಮಾಡುತ್ತಿದ್ದನಂತೆ. ಬಾಲಕಿ ತಂದೆ ಆತನ ಪೋಷಕರಿಗೂ ತಿಳಿಸಿದ್ದರಂತೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ವಿದ್ಯಾರ್ಥಿ ತನ್ನ ವರ್ತನೆ ಸರಿಪಡಿಸಿಕೊಂಡಿಲ್ಲ. ವಿದ್ಯಾರ್ಥಿಯ ಕಿರುಕುಳಕ್ಕೆ ನೊಂದ ಬಾಲಕಿ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ.
