HomeKarnatakaಹಾಸ್ಟೆಲ್ ನಲ್ಲಿಯೇ ನೇಣಿಗೆ ಶರಣಾದ ನರ್ಸಿಂಗ್ ವಿದ್ಯಾರ್ಥಿ

ಹಾಸ್ಟೆಲ್ ನಲ್ಲಿಯೇ ನೇಣಿಗೆ ಶರಣಾದ ನರ್ಸಿಂಗ್ ವಿದ್ಯಾರ್ಥಿ

ಬೆಂಗಳೂರು: ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್​ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಅಗ್ಳೂರು ಹೊರವಲಯ ಬೊಮ್ಮಸಂದ್ರದಲ್ಲಿ ನಡೆದಿದೆ.

ಬಿಟಿಎಲ್ ಕಾಲೇಜಿನ ಹಾಸ್ಟೆಲ್​ನಲ್ಲಿ ಎ.ಪಿ‌.ಆದಿತ್ಯ(19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆದಿತ್ಯ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.

2ನೇ ವರ್ಷದ ಬಿಎಸ್​ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆದಿತ್ಯ, ಹಾಸ್ಟೆಲ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಹಪಾಠಿಗಳು ಕೊಠಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲೇಜು ಆಡಳಿತ ಮಂಡಳಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತ ಆದಿತ್ಯ ತಂದೆ ಪ್ರದೀಪ್ ಆರೋಪಿಸಿದ್ದಾರೆ.

ಮಾದಕವಸ್ತು ಸೇವನೆ ಕೇಸ್​​​ನಲ್ಲಿ ಮಗನನ್ನು ಸಿಲುಕಿಸಿ ವಿದ್ಯಾರ್ಥಿಗಳ ಮುಂದೆ ಅವಮಾನಿಸಿ ಮಾನಸಿಕ ಹಿಂಸೆ ನೀಡಲಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆದಿತ್ಯ ತಂದೆ ಆರೋಪ ಮಾಡಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular