ಕೊಡಗು: ನಿದ್ದೆ ಮಾತ್ರೆ ಸೇವಿಸಿ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿಯಲ್ಲಿ ನಡೆದಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥ ವಿದ್ಯಾರ್ಥಿನಿಯನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಹತ್ತು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದುಬಂದಿದೆ.
