ಚಾಮರಾಜನಗರ: 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಗ್ರಾಮದಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಬಾಲಕ ಓದಿನಲ್ಲಿ ನಿರಾಸಕ್ತಿ ಹೊಂದಿದ್ದ. ಕೆಲ ದಿನಗಳಿಂದ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮನೆಗೆ ಬಂದ ಪೋಷಕರು ತಕ್ಷಣ ಬಾಲಕನನ್ನು ಯಳಂದೂರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲೇ ಬಾಲಕ ಸಾವನ್ನಪ್ಪಿದ್ದಾನೆ. ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.