HomeKarnataka8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಹಳವುದರ ಲಂಬಾಣಿಹಟ್ಟಿ ಗ್ರಾಮದಲ್ಲಿ ನಡೆದಿದೆ.

ಲಂಬಾಣಿಹಟ್ಟಿ ಗ್ರಾಮದ ಬೇಬಿ ಬಾಯಿ ಹಾಗೂ ಉಮೇಶ್ ನಾಯ್ಕ್ ದಂಪತಿಯ ಪುತ್ರಿ ಸಂಜನಾ (14) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ.

ಕರಿಯಮ್ಮನ ಹಟ್ಟಿ ಸರ್ಕಾರಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಏಕಾಏಕಿ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾಳೆ. ಘಟನಾ ಸ್ಥಳಕ್ಕೆ ಭರಮಸಾಗರ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿಯ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular