ಚಿಕ್ಕಬಳ್ಳಾಪುರ: ಅಂತಿಮ ವರ್ಷದ ಪದವಿ ವಿದ್ಯಾರ್ಥಿಯೋರ್ವ ಹಾಸ್ಟೇಲ್ ರೂಮ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೇರಸಂದ್ರದಲ್ಲಿ ನಡೆದಿದೆ.
ಕೇರಳ ಮೂಲದ ಮೊಹಮ್ಮದ್ ಶಬ್ಬೀರ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ. ಪ್ರತಿಷ್ಠಿತ ಕಾಲೇಜಿನಲ್ಲಿ ಆರ್ ಸಿಟಿ ಎನ್ನುವ ಅಲೈಡ್ ಸೈನ್ಸ್ ಕೋರ್ಸ್ ನ ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ. ಇನ್ನಾರು ತಿಂಗಳಲ್ಲಿ ಕೋರ್ಸ್ ಮುಗಿಯುತ್ತಿತ್ತು. ಅಷ್ಟರಲ್ಲಿ ದುಡುಕಿನ ನಿರ್ಧಾರ ಕೈಗೊಂಡು ಬದುಕನ್ನೇ ಅಂತ್ಯಗೊಳಿಸಿಕೊಂಡಿದ್ದಾನೆ.
ಪ್ರೀತಿಸಿದ ಯುವತಿ ತನ್ನ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದು ಡೆತ್ ನೋಟ್ ಬರೆದಿಟ್ಟು ಮೊಹಮ್ಮದ್ ಶಬ್ಬೀರ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಾಸ್ಟೆಲ್ ರೂಮ್ ನ ಕಿಟಕಿಗೆ ಟವೆಲ್ ನಿಂದ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ವಿಷಯ ತಿಳಿದು ಪೇರಸಂದ್ರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ವಿದ್ಯಾರ್ಥಿ ರೂಮ್ ಪರಿಶೀಲಿಸಿದಾಗ ಆತ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ.
ಮೃತ ಶಬ್ಬೀರ್ ತನ್ನ ಸಹಪಾಠಿಯೊಬ್ಬಳನ್ನು ಪ್ರೋತಿಸುತ್ತಿದ್ದ. ಕೆಲ ತಿಂಗಳಿಂದ ಆಕೆ ಶಬ್ಬೀರ್ ಮೊಬೈಲ್ ನಂಬರ್ ನ್ನು ಬ್ಲಾಕ್ ಮಾಡಿದ್ದಳು. ಸರಿಯಾಗಿ ಮಾತನಾಡುತ್ತಿರಲಿಲ್ಲ. ಇದರಿಂದ ನೊಂದು ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.