ಕಲಬುರಗಿ: 7ನೇ ತರಗತಿ ವಿದ್ಯಾರ್ಥಿ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆದಿದೆ.
ಸೇಡಂ ತಾಲೂಕಿನಲ್ಲಿರುವ ಇಂದಿರಾ ಗಾಂಧಿ ಬಾಲಕರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ನಾರಾಯಣ ಪಾಳಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಕೊಠಡಿಯ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿದ್ಯಾರ್ಥಿಯ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.