HomeKarnatakaBIG NEWS: ಹಾಸ್ಟೇಲ್ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

BIG NEWS: ಹಾಸ್ಟೇಲ್ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಕೋಲಾರ: ವಸತಿ ನಿಲಯದ ಕೊಠಡಿಯಲ್ಲಿ ತಾನು ಮಲಗುವ ಮಂಚಕ್ಕೆ ನೇಣುಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

17 ವರ್ಷದ ಬಿಂದುಶ್ರೀ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಹಾಸ್ಟೇಲ್ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿಯ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ.

ಮೃತ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಮೂಲದ ಗಂಗರೆಕಾಲುವೆ ನಿವಾಸಿ. ಶ್ರೀನಿವಾಸಪುರ ಹೊರವಲಯದಲ್ಲಿರುವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular