HomeKarnatakaಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ಬುದ್ಧಿವಾದ ಹೇಳಿದ ಕಾಲೇಜು ಸಿಬ್ಬಂದಿ: ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ಬುದ್ಧಿವಾದ ಹೇಳಿದ ಕಾಲೇಜು ಸಿಬ್ಬಂದಿ: ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ: ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ಕಾಲೇಜಿನ ಸಿಬ್ಬಂದಿ ಬುದ್ಧಿವಾದ ಹೇಳಿದ್ದರಿಂದ ಮನನೊಂದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಭಾನುವಾರ ಘಟನೆ ನಡೆದಿದೆ. ಶಾರದಾ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಹೀರೆಕೇರಿ ಗಲ್ಲಿಯ ನಿವಾಸಿ ತೇಜಸ್ವಿನಿ(17) ಆತ್ಮಹತ್ಯೆ ಮಾಡಿಕೊಂಡವರು.

ಫೆಬ್ರವರಿ 27ರಂದು ವಾರ್ಷಿಕ ಪರೀಕ್ಷೆಯ ಸಂದರ್ಭದಲ್ಲಿ ನಕಲು ಮಾಡುವಾಗ ಸಿಕ್ಕಿಬಿದ್ದಿದ್ದರು. ಕಾಲೇಜಿನ ಸಿಬ್ಬಂದಿ ಪ್ರಶ್ನಿಸಿ ಪೋಷಕರಿಗೆ ವಿಷಯ ತಿಳಿಸಿದ್ದರು. ಸಿಬ್ಬಂದಿ ಸಿಸಿಟಿವಿ ಪರಿಶೀಲಿಸಲು ಮುಂದಾದಾಗ ಅಲ್ಲಿಂದ ತೆರಳಿದ ವಿದ್ಯಾರ್ಥಿನಿ ಮಹಾರಾಣಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular