HomeIndia14ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

14ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮುಂಬೈ: ವಿದ್ಯಾರ್ಥಿನಿಯೊಬ್ಬಳು 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ದಾದರ್ ಪ್ರದೇಶದಲ್ಲಿ ನಡೆದಿದೆ.

ಝಾನಾ ಸೇಥಿಯಾ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಝಾನಾ, ಟೆಕ್ನೋ ಹೈಟ್ಸ್ ಕಟ್ಟದ ಎಂಟನೇ ಮಹಡಿಯಲ್ಲಿ ಪೋಷಕರ ಜೊತೆ ವಾಸವಾಗಿದ್ದಳು. ಪ್ರತಿದಿನ ತನ್ನ ಸ್ನೇಹಿತರೊಂದಿಗೆ 14ನೇ ಮಹಡಿಯ ಟೆರೇಸ್ ಗೆ ತೆರಳುತ್ತಿದ್ದಳು. ಹೀಗೆ ಟೆರೇಸ್ ಮೇಲೆ ಹೋದವಳು ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೃತ ಝಾನಾಳಿಗೆ ಡೈರಿ ಬರೆಯುವ ಅಭ್ಯಾಸವಿತ್ತು. ಡೈರಿಯಲ್ಲಿ ತನಗೆ ಆತ್ಮಹತ್ಯೆ ಆಲೋಚನೆ ಬರುತ್ತಿರುವುದಾಗಿ ಬರೆದುಕೊಂಡಿರುವ ಬಗ್ಗೆ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular