HomeLatest NewsBIG NEWS: ಹಾಸ್ಟೆಲ್ ನಲ್ಲೇ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿನಿ

BIG NEWS: ಹಾಸ್ಟೆಲ್ ನಲ್ಲೇ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿನಿ

ಮೈಸೂರು: ಬಿಎಸ್ ಸಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಶಖಿನಾ (20) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಟೆರೇಶಿಯನ್ ಕಾಲೇಜು ಹಾಸ್ಟೆಲ್ ರೂಮ್ ನಲ್ಲಿಯೇ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ಡಿದ್ದಾಳೆ. ವಿದ್ಯಾರ್ಥಿನಿಯ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಮೂಲದ ಶಖೀನಾ ಮೈಸೂರಿನಲ್ಲಿ ಬಿಎಸ್ ಸಿ ಓದುತ್ತಿದ್ದಳು. ಇಂದು ೬ನೇ ಸೆಮಿಸ್ಟರ್ ಬ್ಪುತಶಾಸ್ತ್ರ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಹಾಸ್ಟೇಲ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾಳೆ. ನಜರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular