HomeKarnatakaದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ: ಮನೆಯಲ್ಲೇ ಆತ್ಮಹತ್ಯೆ

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ: ಮನೆಯಲ್ಲೇ ಆತ್ಮಹತ್ಯೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಸುಳ್ಯಪದವಿನ ಕನ್ನಡ್ಕದಲ್ಲಿ ಭಾನುವಾರ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲೆ ನಿವಾಸಿ ಚಂದ್ರಶೇಖರಗೌಡ ಅವರ ಪುತ್ರಿ ದೀಕ್ಷಾ(16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತಂದೆ, ತಾಯಿ ಕೃಷಿ ಕಾರ್ಯದಲ್ಲಿ ತೊಡಗಿದ್ದ ವೇಳೆ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ದೀಕ್ಷಾ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುತ್ತೂರು ಖಾಸಗಿ ಕಾಲೇಜಿನಲ್ಲಿ ದೀಕ್ಷಾ ಪ್ರಥಮ ಪಿಯುಸಿ ಓದುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular