HomeCrimeಮನೆಯಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ವಿದ್ಯಾರ್ಥಿನಿ

ಮನೆಯಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ವಿದ್ಯಾರ್ಥಿನಿ

ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಮಣಿಪಾಲದ ಹೆರ್ಗ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಮಹೇಶ್ ಎಂಬವರ ಪುತ್ರಿ 20 ವರ್ಷದ ಶ್ರೀನಿಧಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಯಾವ ಕಾರಣಕ್ಕೆ ಸಾವಿಗೆ ಶರಣಾಗಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಶೆಟ್ಟಿ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೊತೆಗೆ ಮಗಳ ವಿದ್ಯಾಭ್ಯಾಸಕ್ಕೂ ಅನುಕೂಲವಾಗಲಿ ಎಂಬ ಕಾರಣಕ್ಕೆ ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular