HomeIndiaವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ: ಶಿಕ್ಷಕ ಅರೆಸ್ಟ್

ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ: ಶಿಕ್ಷಕ ಅರೆಸ್ಟ್

ಥಾಣೆ: ವಿದ್ಯಾರ್ಥಿನಿಗೆ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭೀವಂಡಿಯಲ್ಲಿ ನಡೆದಿದೆ.

ಮುಜಾಮ್ಮಿಲ್ ಬಂಧಿತ ಶಿಕ್ಷಕ. 7 ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕ ಕಿರುಕುಳ ನೀಡುತ್ತಿದ್ದ. ವಿದ್ಯಾರ್ಥಿನಿ ಯಾವಾಗಲೂ ಶಾಲೆಗೆ ತಡವಾಗಿ ಬರುತ್ತಿರುವುದನ್ನು ಪ್ರಾಂಶುಪಾಲರು ಪ್ರಶ್ನಿಸಿದಾಗ ವಿಷಯ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರು ಪ್ರಶ್ನಿಸಿದಾಗ ಭಯಗೊಂಡು ಮೊದಲು ವಿಷಯ ಹೇಳಿಲ್ಲ. ಪೋಷಕರನ್ನು ಶಾಲೆಗೆ ಕರೆಸಿ, ವಿದ್ಯಾರ್ಥಿನಿ ವಿಳಂಬವಾಗಿ ಶಾಲೆಗೆ ಬರುತ್ತಿದ್ದಾಳೆ ಎಂದು ಪೋಷಕರಿಗೆ ಪ್ರಾಂಶುಪಾಲರು ತಿಳಿಸಿದ್ದಾರೆ. ಆದರೂ ವಿದ್ಯಾರ್ಥಿನಿ ಮೌನವಾಗಿದ್ದಳು. ಮನೆಗೆ ಬಂದ ಬಳಿಕ ವಿದ್ಯಾರ್ಥಿನಿ, ಶಿಕ್ಷಕ ಮುಜಾಮ್ಮಿಲ್ ನ ದುಷ್ಕೃತ್ಯದ ಬಗ್ಗೆ ವಿವರಿಸಿದ್ದಾಳೆ. ಅಲ್ಲದೇ ಬೇರೆ ವಿದ್ಯಾರ್ಥಿನಿಯರಿಗೂ ಶಿಕ್ಷಕ ಇದೇ ರೀತಿ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ ನೀಡಿದ್ದಾನೆ ಎಂದು ತಿಳಿಸಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕಿ ಪೋಷಕರು ಶಾಂತಿನಗರ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಅಡಿ ಹಾಗೂ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಿ, ಶಿಕ್ಷಕನನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular