HomeLatest News10 ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ: ಕೊಲೆ ಶಂಕೆ

10 ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ: ಕೊಲೆ ಶಂಕೆ

ಬೆಂಗಳೂರು: 10 ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವ ರಸ್ತೆ ಪಕ್ಕದ ಮೋರಿಯಲ್ಲಿ ಪತ್ತೆಯಾಗಿದೆ. ಪ್ರೀತಿ ವಿಚಾರಕ್ಕೆ ಯುವತಿ ಕಡೆಯವರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿ ನಿವಾಸಿ ನಿಶಾಂಕ್ ಮೃತಪಟ್ಟ ವಿದ್ಯಾರ್ಥಿ. ಡಿಸೆಂಬರ್ 15ರಂದು ಪಕ್ಕದ ಮನೆಯವರ ಬಳಿ ಬೈಕ್ ಪಡೆದು ಹೊರಗೆ ಹೋಗಿದ್ದ ನಿಶಾಂಕ್ ನಾಪತ್ತೆಯಾಗಿದ್ದ. ಹುಡುಕಾಟ ನಡೆಸಿದ ಕುಟುಂಬದವರು ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದರು.

ಪ್ರಥಮ ಪಿಯುಸಿ ಓದುತ್ತಿದ್ದ ನಿಶಾಂಕ್ ಪ್ರತಿದಿನ ಬಸ್ ನಲ್ಲಿ ಚಿಕ್ಕಬಳ್ಳಾಪುರ ಕಾಲೇಜಿಗೆ ಹೋಗಿ ಬರುತ್ತಿದ್ದ. ಇತ್ತೀಚೆಗೆ ಸಹಪಾಠಿಯೊಂದಿಗೆ ಆತನಿಗೆ ಪ್ರೀತಿಯಾಗಿತ್ತು. ಹುಡುಗಿ ಕಡೆಯವರು ಕಾಲೇಜಿನ ಬಳಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಅಲ್ಲದೆ ನಾಪತ್ತೆಯಾದ ಹಿಂದಿನ ದಿನ ಹುಡುಗಿ ಜೊತೆಗಿರುವ ಫೋಟೋವನ್ನು ಹಾಕಿ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದ್ದ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗಾಗಿ ಹುಡುಗಿ ಮನೆಯವರೇ ಕೊಲೆ ಮಾಡಿರಬಹುದು ಎಂದು ನಿಶಾಂಕ್ ಕುಟುಂಬದವರು ಆರೋಪಿಸಿದ್ದಾರೆ. ನಾಪತ್ತೆಯಾದ 10 ದಿನದ ನಂತರ ಕೊಲೆ ಮಾಡಿ ತಂದು ಮೋರಿಗೆ ಹಾಕಿದ್ದಾರೆ. ಇದು ಅಪಘಾತವಲ್ಲ, ಕೊಲೆ ಎಂದು ಶಂಕೆ ವ್ಯಕ್ತವಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular