HomeKarnatakaಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿ ಸ್ನೇಹಿತರಿಂದಲೇ ಗ್ಯಾಂಗ್ ರೇಪ್

ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿ ಸ್ನೇಹಿತರಿಂದಲೇ ಗ್ಯಾಂಗ್ ರೇಪ್

ಬಳ್ಳಾರಿ: ವಿದ್ಯಾರ್ಥಿನಿಯನ್ನು ಹಾಡ ಹಗಲೇ ಆಟೋದಲ್ಲಿ ಅಪಹರಿಸಿ ಸ್ನೇಹಿತರಿಂದಲೇ ಅತ್ಯಾಚಾರ ನಡೆದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಿಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರಾಗಿದ್ದಳು. ಈ ವೇಳೆ ವಿದ್ಯಾರ್ಥಿನಿಯನ್ನು ನಾಲ್ವರು ದುರುಳರು ನಿನ್ನ ಅಣ್ಣ ಬಂದಿದ್ದಾನೆ, ಕರೆಯುತ್ತಿದ್ದಾನೆ ಎಂದು ಹೇಳಿ ಪರೀಕ್ಷಾ ಹಾಲ್ ನಿಂದ ಹೊರಗೆ ಕರೆಸಿಕೊಂಡಿದ್ದಾರೆ. ಬಳಿಕ ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನ್ಯಾಪ್ ಮಾಡಿದ್ದಾರೆ. ಬಳ್ಳಾರಿಯಿಂದ ಕೊಪ್ಪಳಕ್ಕೆ ಕರೆದೊಯ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿನಿಗೆ ಬಲವಂತದಿಂದ ಬಿಯರ್ ಕುಡಿಸಿರುವ ಕಾಮುಕರು ಬಳಿಕ ಆಕೆಯನ್ನು ಸಣಾಪುರ ಬಳಿಯ ಹೋಟೆಲ್ ಗೆ ಕರೆದೊಯ್ದು ಸಾಮೂಹಿಕ ಅತ್ಯಾಚರವೆಸಗಿದ್ದಾರೆ. ವಿದ್ಯಾರ್ಥಿನಿಯ ಸ್ನೇಹಿತರೇ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

ಆರೋಪಿಗಳಾದ ನವೀನ್, ಸಾಕೀಬ್, ತನು ಸೇರಿದಂತೆ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಬಳ್ಳಾರಿ ನಗರದ ಕೌಲ್ ಬಜಾರ್ ನವರು ಎನ್ನಲಾಗಿದ್ದು, ನಾಪತ್ತೆಯಾಗಿರುವ ಆರೋಪಿಗಳ ಬಂಧನಕ್ಕೆ ಪೊಲಿಸರು ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular